ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯ ಅಂಶಗಳಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯಾಧ್ಯಕ್ಷ ಪಟ್ಟ: ನಿರ್ಮಲನಂದನಾಥ ಶ್ರೀ ಆಶೀರ್ವಾದ ಪಡೆದ BY ವಿಜಯೇಂದ್ರ
ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ
ರಾಜ್ಯದಲ್ಲಿ ಒಬ್ಬರು ಟೆಂಪ್ರವರಿ ಮುಖ್ಯಮಂತ್ರಿ ಹಾಗೂ ಇನ್ಬೊಬ್ಬರು ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ಅವರು ತೆಲಂಗಾಣದಲ್ಲಿ ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೋಗಿ ತಮ್ಮ ಬೆನ್ನು ತಾವೇ ತಟ್ಟಿಕೊಂಡು ಮುಖಭಂಗಕ್ಕೆ ಒಳಗಾಗಿದ್ದಾರೆ. ಡುಪ್ಲಿಕೇಟ್ ಸಿಎಂ ತೆಲಂಗಾಣಲದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ 2 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದಾರೆ. 2013 ರಲ್ಲಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ 2 ಮುಕ್ಕಾಲು ಲಕ್ಷ ಸರ್ಕಾರಿ ನೌಕರರ ನೇಮಕಾತಿಯನ್ನೇ ಮಾಡದೆ ಖಾಲಿ ಇಟ್ಟಿದ್ದರು ಎಂದು ಕಿಡಿಕಾರಿದ್ದಾರೆ