ಹುಬ್ಬಳ್ಳಿ; ಅನೇಕ ವಿಕಲಚೇತನರು ಇಂದು ಕ್ರೀಡೆ, ನೃತ್ಯ, ಚಿತ್ರಕಲೆ, ಸಿನೆಮಾ, ಇಂಜಿನೀಯರಿಂಗ್, ವೈದ್ಯಕೀಯ ಹೀಗೆ ವಿಭಿನ್ನ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿಶೇಷ ಸಾಧನೆ ಗೈದಿದ್ದಾರೆ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯಗಳಾಗಬೇಕು ಎಂದು ಶಾಸಕರಾದ ಮಹೇಶ ಟೆಂಗಿನಕಾಯಿ ಹೇಳಿದರು.
ಇಂದು ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಿಮ್ಸ್-ಆಶಾಕಿರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ, ವಿಕಲ ಚೇತನ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಇನ್ನರ್ ವೀಲ್ ಕ್ಲಬ್ ಪಶ್ಚಿಮ ಜಿಲ್ಲೆ 317 ಸಕ್ಷಮ ಉತ್ತರ ಕರ್ನಾಟಕ ಪ್ರಾಂತ್ರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಿಲ್ಲೆ, ಸ್ವಯಂ ಸೇವಾ ಸಂಸ್ಥೆಗಳು, ವಿಕಲಚೇತನರ ಸಂಘ ಸಂಸ್ಥೆಗಳು ವಿ.ಆರ್.ಡಬ್ಲೂ/ ಯು.ಆರ್.ಡಬ್ಲೂ/ಎಮ್.ಆರ್.ಡಬ್ಲೂ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಪ್ರಪಂಚದಾದ್ಯಂತ ವಿಶ್ವ ಅಂಗವಿಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ವಿಕಲಚೇತನರನ್ನು ಮುಖ್ಯ ವೇದಿಕೆಗೆ ತರುವ ಸುಧಿನವಾಗಿದೆ. ನಿಜವಾಗಿಯೂ ಅಂಗವಿಕಲರಿಗೆ ಬೇಕಾಗಿರುವುದು ಕರುಣೆ ಅಥವಾ ಸಹಾಯವಲ್ಲ, ಅವರನ್ನು ಸಮಾಜದ ಮುಖ್ಯ ವೇದಿಕೆ ತರಲು ಬೇಕಾಗಿರುವುದು ಅವಕಾಶ. ಅಂತಹ ಅವಕಾಶಗಳನ್ನು ಸೃಷ್ಠಿಸಿದ್ದಲ್ಲಿ ಮಾತ್ರ ವಿಕಲಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ವಿವಿಧೊದ್ದೇಶ ಪುನರ್ವಸತಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು ಉತ್ತಮ ಕಾರ್ಯ ನಿರ್ವಹಣೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ಎಲ್ಲ ವಿಕಲಚೇತನ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸಕ್ಷಮ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಬಿ.ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ, ಇನ್ನರ್ ವೀಲ್ ಕ್ಲಬ್ ಹುಬ್ಬಳ್ಳಿ ಪಶ್ಚಿಮ 317, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಸಂಘ ಸಂಸ್ಥೆಗಳ ಮುಖಂಡರು, ಇತರರು ಉಪಸ್ಥಿತರಿದ್ದರು.
ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ಜಗದೀಶ ಸ್ವಾಗತಿಸಿದರು.
ಶಿಕ್ಷಕರಾದ ಅಣ್ಣಪ್ಪ ಕೋಳಿ ಅವರು ನಿರೂಪಿಸಿ, ವಂದಿಸಿದರು.