ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಸುವರ್ಣ ಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ (Siddaramaiah) ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಗೌರವಗಳೊಂದಿಗೆ ಸ್ವಾಗತ ಕೋರಲಾಯಿತು.
ಇದಕ್ಕೂ ಮುನ್ನ ಏರ್ಪೋರ್ಟ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸೇರಿದಂತೆ ಇತರ ಗಣ್ಯರು ಹೂಗುಚ್ಚ ನೀಡಿ ಸ್ವಾಗತಿಸಿದರು. ಸುವರ್ಣಸೌಧಕ್ಕೆ ಬರುವ ಮುನ್ನ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಮೀರ್ ಅಹ್ಮದ್ ಅವರನ್ನು ಸಮರ್ಥನೆ ಮಾಡಿಕೊಂಡರು.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಜಮೀರ್ ಅಹ್ಮದ್ ಖಾನ್ ʻಮುಸ್ಲಿಂʼ ಸ್ಪೀಕರ್ಗೆ (Muslim Speaker) ಕೈಮುಗಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ (BJP) ರಾಜೀನಾಮೆಗೆ ಆಗ್ರಹಿಸಿದೆ. ಈ ಕುರಿತು ಮಾತನಾಡಿದ ಸಿಎಂ, ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಎಂದರು.
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ನಾವು ತೆಲಂಗಾಣ ಗೆದ್ದಿದ್ದೇವೆ, ಉಳಿದ 3 ಸೋತಿದ್ದೇವೆ. ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪೇ ಅಂತಿಮ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ತೇವೆ ಎಂದರಲ್ಲದೇ ಗ್ಯಾರಂಟಿ ವಿಫಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.