ರಾಮನಗರ:- ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡು ಮೂವರು ಕಾರ್ಮಿಕರು ಸಜೀವ ದಹನವಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ