ದೆಹಲಿ:- ಸಿಬಿಐ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ..
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಬಂಧಿಸಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್ನಲ್ಲಿ ಸಿಬಿಐ ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡಿದ ಕೆಲವು ದಿನಗಳ ನಂತರ ಸಿಬಿಐ ಈ ಕ್ರಮ ಕೈಗೊಂಡಿದೆ. ಅದೇ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರು ಮೂರು ದಿನಗಳ ಕಾಲ ಕೇಂದ್ರೀಯ ತನಿಖಾ ಬ್ಯೂರೋ (ಸಿಬಿಐ) ಕಸ್ಟಡಿಗೆ ನೀಡಲು ಆದೇಶಿಸಿದ್ದ ಜೂನ್ 26 ರ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದಾರೆ.
ಜೂನ್ 29 ರಂದು, ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವ ವಿಚಾರಣಾ ನ್ಯಾಯಾಲಯವು,
ಅವರ ಹೆಸರು ಪ್ರಮುಖ ಪಿತೂರಿದಾರರಲ್ಲಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವ ಕಾರಣ, ಅವರ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಾಗಬಹುದು ಎಂದು ಹೇಳಿದೆ
ಅರವಿಂದ್ ಕೇಜ್ರಿವಾಲ್ ಅವರು ತನಿಖಾ ತಂಡದೊಂದಿಗೆ ಸಹಕರಿಸುತ್ತಿಲ್ಲ. ಮೂರು ದಿನಗಳ ಕಸ್ಟಡಿಯಲ್ಲಿ ನುಣುಚಿಕೊಳ್ಳುವ ಉತ್ತರವನ್ನು ನೀಡಿದ್ದಾರೆ ಎಂದು ಸಿಬಿಐ ಹೇಳಿದೆ.
ಹೀಗಾಗಿ ಜಾಮೀನು ತಿರಸ್ಕೃತ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ ನಾಳೆ (ಮಂಗಳವಾರ) ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ಪೀಠವು ದೆಹಲಿ ಮುಖ್ಯಮಂತ್ರಿಯ ಅರ್ಜಿಯ ವಿಚಾರಣೆ ನಡೆಸಲಿದೆ.