ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಎಂ.ಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Water After Tea: ಟೀ ಕುಡಿದ ನಂತ್ರ ನೀರು ಕುಡಿಯುತ್ತೀರಾ..? ಮೊದಲು ನಿಲ್ಲಿಸಿ – ಈ ಸ್ಟೋರಿ ನೋಡಿ
ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)