ಪಟಾಕಿ ಗೋದಾಮಿನಲ್ಲಿ ಪ್ರಬಲ ಸ್ಫೋಟಗೊಂಡ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದು 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಫಿಲಿಪೈನ್ಸ್ನ ಜಂಬೊಂಗಾ ನಗರದಲ್ಲಿ ನಡೆದಿದೆ,
ಸ್ಫೋಟವು ಗೋದಾಮಿನ ಬಳಿಯ ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸ್ಥಳಕ್ಕೆ ಧಾವಿಸಿದ ಜಂಬೊಂಗಾ ಮೇಯರ್ ಜಾನ್ ದಲಿಪೆ ಸುದ್ದಿಗಾರರೊಂದಿಗೆ ಮಾತನಾಡಿದ್ದರು ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ಸ್ಫೋಟದಿಂದ 20 ಜನರು ಗಾಯಗೊಂಡಿದ್ದು ಅವರನ್ನು ರಕ್ಷಣಾ ಸಿಬ್ಬಂದಿ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ ಎಂದಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಒಂದು ಮಗುವೂ ಸೇರಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಫೋಟದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)