ಮಂಡ್ಯ:- ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ HDK ಕಿಡಿಕಾರಿದ್ದಾರೆ.
ಅಂಬೇಡ್ಕರರ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ: ಬಿ.ವೈ.ವಿಜಯೇಂದ್ರ!
ಈ ಸಂಬಂಧ ಮಾತನಾಡಿದ ಅವರು, ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಯ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲರಾದರು. ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ. ಗಾಂಧೀಜಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇವತ್ತು ರಾಜ್ಯದಲ್ಲಿದ್ಯಾ? ಎಂದು ಪ್ರಶ್ನಿಸಿದರು.