ಗದಗ:– ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕನನ್ನು ಅರೆಸ್ಟ್ ಮಾಡಲಾಗಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್ ದಫೇದಾರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್ಬುಕ್ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್ ದಫೇದಾರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.