ಮೈಸೂರು: ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದ ಜಾಹೀರಾತಿನಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ (S.T.Somshekar) ಭಾವಚಿತ್ರ ಇರುವುದು ಕುತೂಹಲ ಮೂಡಿಸಿದೆ. ಬಿಜೆಪಿ ನಾಯಕರಾಗಿದ್ದ ಹೆಚ್.ವಿ.ರಾಜೀವ್ ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಸಂಬಂಧ ಜಾಹೀರಾತು ಪ್ರಕಟಿಸಲಾಗಿತ್ತು. ಜಾಹೀರಾತಿನಲ್ಲಿ ಎಸ್.ಟಿ.ಸೋಮಶೇಖರ್ ಅವರ ಭಾವಚಿತ್ರವೂ ಇದೆ.
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ಬಿಜೆಪಿ ಆಡಳಿತದಲ್ಲಿ ಎಸ್.ಟಿ.ಸೋಮಶೇಖರ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈ ವೇಳೆ ಸೋಮಶೇಖರ್ ಜೊತೆ ರಾಜೀವ್ ಆಪ್ತರಾಗಿದ್ದರು. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಎಸ್.ಟಿ. ಸೋಮಶೇಖರ್ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್ಯಸಭಾ ಚುನಾವಣಾ ಸಂದರ್ಭದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ್ದರು. ಈಗ ಎಸ್ಟಿಎಸ್ ನೇತೃತ್ವದಲ್ಲಿ ಆಪ್ತ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಚರ್ಚೆ ಹುಟ್ಟುಹಾಕಿದೆ.