ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಸರ್ಕಾರ ಚಿಂತಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ಧಾರೆ.
ನಗರದಲ್ಲಿ ಮಾತನಾಡಿದ ಸಚಿವರು, “ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಚಿಂತನೆ ನಡೆಸಲಾಗಿದೆ” ಎಂದರು.
ಶಾಲಾ ಊಟದಲ್ಲಿ ಸಿರಿಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡುವ ಕುರಿತು ಚರ್ಚೆಗಳು ನಡಯುತ್ತಿವೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.