ಕಝಕಿಸ್ತಾನ: ಅಕ್ಟೌ ನಗರದ ಬಳಿ ತುರ್ತು ಭೂಸ್ಪರ್ಶ ಉಂಟಾಗಿ 67 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನಗೊಂಡಿತ್ತು. ಘಟನೆಯಲ್ಲಿ ಕನಿಷ್ಠ 42 ಜನರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಕಝಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.
‘ಅಝರ್ ಬೈಜಾನ್ ಏರ್ ಲೈನ್ಸ್ʼ ವಿಮಾನವು J2-8243 ಬಾಕುವಿನಿಂದ ರಷ್ಯಾದ ಗ್ರೋಜ್ನಿಗೆ ತೆರಳುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಮಾರ್ಗವನ್ನು ಬದಲಾಯಿಸಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ವಿಮಾನ ಅಪಘಾತದಲ್ಲಿ 42 ಜನರು ಮೃತಪಟ್ಟಿದ್ದಾರೆ ಎಂದು ಕಝಕಿಸ್ತಾನದ ಸಚಿವಾಲಯ ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆರಂಭಿಕ ವರದಿಗಳ ಪ್ರಕಾರ, ವಿಮಾನವು ಮೊದಲು ಪಕ್ಷಿಗಳಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಪೈಲಟ್ ಗಳು ವಿಮಾನವನ್ನು ನಿಯಂತ್ರಣಕ್ಕೆ ತರಳು ಪ್ರಯತ್ನಿಸಿದ್ದರು ಅದು ವಿಫಲವಾಗಿಲ್ಲ. ಅಕ್ಟೌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು ಮೂರು ಕಿ.ಮೀ. ದೂರದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.