ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಹಾಗೂ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಷ್ಟು ಫಾರ್ಮ್ ಕಂಡು ಬರುತ್ತಿಲ್ಲ. ಬದಲಿಗೆ ಕಳಪೆ ಪ್ರದರ್ಶನ ತೋರುತ್ತಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡುವೆಯೇ ನಿವೃತ್ತಿ ಘೋಷಿಸಲು ಮುಂದಾಗಿದ್ದರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.
ಇದರ ಬೆನ್ನಲ್ಲೇ ದೇಶೀ ಕ್ರಿಕೆಟ್ ಆಡಲು ಒಲ್ಲೆ ಎನ್ನುವ ಹಿರಿಯ ಆಟಗಾರರಿಗೆ ಎಚ್ಚರಿಕೆಯ ಸಂದೇಶ ರವಾನಿಸಲು ಮುಂದಾಗಿದೆ. ಈ ಸಭೆಯಲ್ಲಿ ಚರ್ಚೆಯಾಗಿರುವ ಪ್ರಮುಖ ವಿಷಯವೆಂದರೆ, ಸ್ಟಾರ್ ಆಟಗಾರರ ಕಳ್ಳಾಟಕ್ಕೆ ಬ್ರೇಕ್ ಹಾಕುವುದು ಹೇಗೆ ಎಂಬುದು. ವಾಸ್ತವವಾಗಿ ತಂಡದ ಕೆಲವು ಸ್ಟಾರ್ ಆಟಗಾರರು ಯಾವುದಾದರೊಂದು ಕಾರಣ ನೀಡಿ ದ್ವೀಪಕ್ಷಿಯ ಸರಣಿಗಳಿಂದ ವಿಶ್ರಾಂತಿ ಪಡೆಯುತ್ತಿದ್ದರು.
ಫ್ರೀಜ್ ನಲ್ಲಿ ಅಪ್ಪಿತಪ್ಪಿಯೂ ಈ ಆಹಾರ ಪದಾರ್ಥಗಳನ್ನು ಇಡಬೇಡಿ! ಇವು ವಿಷಕ್ಕೆ ಸಮ
ಅಂತಹವರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರದ್ದೇ ಸಿಂಹಪಾಲು. ಇದರಿಂದ ಬೇಸತ್ತಿರುವ ಬಿಸಿಸಿಐ ಇದಕ್ಕೆ ಸಂಬಂಧಿಸಿದಂತೆ ಕಠಿಣ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಆಟಗಾರರು ಸೂಕ್ತ ಕಾರಣವಿಲ್ಲದೆ ದ್ವಿಪಕ್ಷೀಯ ಸರಣಿಗಳಿಂದ ಹೊರಗುಳಿಯುವಂತಿಲ್ಲ.
ಅಷ್ಟೇ ಅಲ್ಲ, ಈಗ ಹಿರಿಯರಿರಲಿ, ಕಿರಿಯರಿರಲಿ ಎಲ್ಲರೂ ದೇಶೀಯ ಕ್ರಿಕೆಟ್ ಆಡಲೇಬೇಕು. ವರದಿಯ ಪ್ರಕಾರ, ಆಟಗಾರನು ರೆಡ್ ಬಾಲ್ ಕ್ರಿಕೆಟ್ ಆಡಲು ಬದ್ಧನಾಗಿದ್ದರೆ ಅವನು ದೇಶೀಯ ಕ್ರಿಕೆಟ್ ಆಡಬೇಕಾಗುತ್ತದೆ ಎಂದು ಈ ಹಿಂದೆಯೇ ಕೋಚ್ ಗಂಭೀರ್ ಸ್ಪಷ್ಟವಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಸ್ಟಾರ್ ಆಟಗಾರರು ದೇಶಿಯ ಕ್ರಿಕೆಟ್ ಟೂರ್ನಿಗಳಿಗೆ ಲಭ್ಯರಿರಬೇಕು ಎಂದು ಮಂಡಳಿ ಸೂಚನೆ ನೀಡಿದೆ.