ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಧೃಡ ಪಟ್ಟ ಹಿನ್ನೆಲೆ, ಪ್ರಧಾನಿ ಮೋದಿ ಅವರು ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಇಂದು ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
5 ನಿಮಿಷಗಳ ಕಾಲ ಪ್ರಧಾನಿ ಮಾತನಾಡಿದ್ದು, ಬೊಮ್ಮಾಯಿ ಅವರು ತಮಗೆ ಕೋವಿಡ್ ತಗುಲಿದ ಬಗ್ಗೆ ವಿವರಣೆ ನೀಡಿದ್ದಾರೆ. ಕುಟುಂಬ ಸದಸ್ಯರಿಗೂ ಸೋಂಕು ತಗುಲಿದ ಬಗ್ಗೆ ಸಿಎಂ ಮಾಹಿತಿ ನೀಡಿದ್ದು, ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಸಲಹೆ ಕೊಟ್ಟಿದ್ದಾರೆ. ಪ್ರಧಾನಿ ಜೊತೆ ಮಾತುಕತೆ ವೇಳೆ ಕರ್ನಾಟಕ ರಾಜ್ಯದಲ್ಲಿನ ಕೊವಿಡ್ ಪರಿಸ್ಥಿತಿ ಬಗ್ಗೆಯೂ ಕೂಡಾ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.
