ನವದೆಹಲಿ: ತಮಿಳು ನಟ, ಡಿಎಂಡಿಕೆ ನಾಯಕ ವಿಜಯ್ಕಾಂತ್ (Vijayakanth) ನಿಧನಕ್ಕೆ ಇಡೀ ತಮಿಳು ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ, ವಿಜಯ್ಕಾಂತ್ ಅವರ ನಿಧನ ಅತೀವ ದುಃಖ ತಂದಿದೆ.
ತಮಿಳು ಚಲನಚಿತ್ರ ಪ್ರಪಂಚದ ದಂತಕಥೆಯಾಗಿರುವ ಅವರು ತಮ್ಮ ನಟನೆಯಿಂದಲೇ ಎಲ್ಲರ ಮನಗೆದ್ದಿದ್ದರು. ರಾಜಕೀಯ ನಾಯಕರಾಗಿ ಅವರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದರು. ಇಂದು ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಆತ್ಮೀಯ ಸ್ನೇಹಿತರಾಗಿದ್ದರು. ನನ್ನೊಂದಿಗಿನ ಅವರ ಒಡನಾಟವನ್ನು ನಾನು ನೆನಪಲ್ಲಿಟ್ಟುಕೊಂಡಿದ್ದೇನೆ. ಈ ಸಂದರ್ಭದಲ್ಲಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ.
Extremely saddened by the passing away of Thiru Vijayakanth Ji. A legend of the Tamil film world, his charismatic performances captured the hearts of millions. As a political leader, he was deeply committed to public service, leaving a lasting impact on Tamil Nadu’s political… pic.twitter.com/di0ZUfUVWo
— Narendra Modi (@narendramodi) December 28, 2023
ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ವಿಜಯಕಾಂತ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ ಕೂಡ ಆಗಿದ್ದು, ನಂತರ ತಕ್ಷಣವೇ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.