ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡಿ ತಮ್ಮೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಫ್ಲೋರಿಡಾದಿಂದ ಜಾಯಿಂಟ್ ಬೇಸ್ ಆಂಡ್ರ್ಯೂಸ್ಗೆ ಹಿಂತಿರುಗುವಾಗ ಏರ್ ಫೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ನಾನು ಮೋದಿ ಅವರೊಂದಿಗೆ ದೀರ್ಘ ಮಾತುಕತೆ ನಡೆಸಿದೆ. ಮೋದಿ ಮುಂದಿನ ತಿಂಗಳು, ಬಹುಶಃ ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ. ಭಾರತದೊಂದಿಗೆ ನಮಗೆ ಉತ್ತಮ ಸಂಬಂಧವಿದೆ ಎಂದಿದ್ದಾರೆ.
ಪ್ರಧಾನಿ ಮೋದಿ ಜೊತೆಗಿನ ದೂರವಾಣಿ ಸಂಭಾಷಣೆ ಕುರಿತ ಪ್ರಶ್ನೆಗೆ ಟ್ರಂಪ್ ಉತ್ತರಿಸಿದರು. ಭಾರತದೊಂದಿಗೆ ನಾವು ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಎಂದಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಭಾರತಕ್ಕೆ ಕೊನೆಯ ವಿದೇಶ ಪ್ರವಾಸ ಕೈಗೊಂಡಿದ್ದರು. ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ.