ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಮಲೆನಾಡಿಗೆ ಆಗಮಿಸಿದರು. ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿದರು. ಇನ್ನೂ ಕೆಲವೇ ಕ್ಷಣದಲ್ಲಿ ಸುಮಾರು 14 ಕಿ.ಮೀ ಎಸ್ಪಿಜಿ ಭದ್ರತೆಯಲ್ಲಿ ಕಾರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಮಾನ ನಿಲ್ದಾಣದ ಎನ್.ಆರ್.ಪುರ ರಸ್ತೆಯಿಂದ ಶಿವಮೊಗ್ಗದ( shivamogga) ಬಿ.ಹೆಚ್.ರಸ್ತೆ, ನೆಹರು ರಸ್ತೆ, ಬೈಪಾಸ್ ರಸ್ತೆ ಸರ್.ಎಂ. ವಿಶ್ವೇಶ್ವರಯ್ಯ ರಸ್ತೆ(L), ಸಂಗೊಳ್ಳಿ ರಾಯಣ್ಣ ಮೂಲಕ ಸಮಾವೇಶ ಸ್ಥಳಕ್ಕೆ ತೆರಳಲಿದ್ದಾರೆ.
ಮೂರನೇ ಬಾರಿ ಶಿವಮೊಗ್ಗ ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು. ಕಳೆದ ಲೋಕಸಭಾ ಚುನಾವಣೆ ವೇಳೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Loksabha Elections: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ..? ಸೇರಿಸೋದು ಹೇಗೆ..? ಇಲ್ಲಿದೆ ನೋಡಿ ವಿವರ
ಬಳಿಕ ಎರಡನೇ ಬಾರಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಇಂದಿನ ಸಮಾವೇಶದಲ್ಲಿ ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಭಾಗವಹಿಸಿದ್ದಾರೆ.