ಅಯೋಧ್ಯೆ: ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸಲಿರುವ 2 ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ ಹೊಸ ಮಾದರಿಯ ಒಂದು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಸೇರಿದಂತೆ ದೇಶದ ವಿವಿಧ ನಗರಳಿಗೆ ಸಂಪರ್ಕಿಸುವ ಒಟ್ಟು 8 ರೈಲುಗಳ ಸಂಚಾರ ಸೇವೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ.
ಹೊಸದಾಗಿ ಚಾಲನೆಗೊಂಡ ವಂದೇ ಭಾರತ್ ರೈಲುಗಳು ಮಂಗಳೂರು-ಮುಂಡ್ಗಾವ್ (ಗೋವಾ) ಮತ್ತು ಬೆಂಗಳೂರು-ಕೊಯಮತ್ತೂರು ನಡುವೆ ಸಂಚರಿಸಿದರೆ, ಅಮೃತ್ ಭಾರತ್ ರೈಲು (Amrit Bharat Trains) ಪಶ್ಚಿಮ ಬಂಗಾಳದ ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿದೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು-ಬೆಳಗಾವಿ, ಬೆಂಗಳೂರು-ಹೈದರಾಬಾದ್, ಮೈಸೂರು-ಚೆನ್ನೈ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು (Vande Bharat Trains) ಸಂಚರಿಸುತ್ತಿವೆ,
ಇದೀಗ ಮಂಗಳೂರು-ಮುಂಡ್ಗಾವ್ ಹಾಗೂ ಬೆಂಗಳೂರು-ಕೊಯಮತ್ತೂರು ನಡುವೆಯೂ ಸಂಚಾರ ಆರಂಭಗೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನ ಆಧರಿತವಾಗಿರುವ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತದೆ. 22 ಕೋಚ್ಗಳನ್ನ ಒಳಗೊಂಡಿದ್ದು, 1,800 ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣಿಸಬಹುದಾಗಿದೆ. ಅನೇಕ ಐಷಾರಾಮಿ ಸೌಲಭ್ಯಗಳನ್ನೂ ಈ ರೈಲು ಒಳಗೊಂಡಿದೆ.