ಕಲಬುರಗಿ: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಡಿದ್ದು ಜನವರಿ 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ,
ತೆರಳಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮರಳಿ ಮಧ್ಯಾಹ್ನ 1 ಗಂಟೆಗೆ ವಾಪಾಸ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.. ಹೀಗಾಗಿ SPG ತಂಡ ಕಲಬುರಗಿಗೆ ಆಗಮಿಸಿದ್ದು ಬಂದೋಬಸ್ತ್ ಕುರಿತಂತೆ ಜಿಲ್ಲಾಡಳಿತದ ಜೊತೆ ಇವತ್ತು ಚರ್ಚೆ ನಡೆಸಿದ್ರು..