ಬೆಂಗಳೂರು:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ಮೋದಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಲಿದ್ದು, ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಆಗಿದೆ.
Shobha Karandlaje: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ನನ್ನ ಗೆಲುವು ಸುಲಭ -ಶೋಭಾ ಕರಂದ್ಲಾಜೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದ್ದು, ಬಂದೋಬಸ್ತ್ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್, ಪೊಲೀಸ್ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮೇಕ್ರಿ ಸರ್ಕಲ್ನಲ್ಲಿ ಚಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನಲೆ ಮೇಕ್ರಿ ಸರ್ಕಲ್ನಲ್ಲಿ ಹೆಚ್ಚುವರಿಯಾಗಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಇಂದು ಮೇಕ್ರಿ ಸರ್ಕಲ್ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಲು ಮುಂದಾದರೆ ಕೂಡಲೇ ಪೊಲೀಸರು ವಶಕ್ಕೆ ಪಡೆದು ಕ್ರಮಕೈಗೊಳ್ಳಲಿದ್ದಾರೆ. ಇನ್ನು ಸಮಾವೇಶದ ನಂತರ ರಸ್ತೆ ಮಾರ್ಗವಾಗಿ ಹೆಚ್.ಎ.ಎಲ್ ಗೆ ಮೋದಿ ತಲುಪಲಿದ್ದು, ಹೆಜ್ಜೆ ಹಜ್ಜೆಗೂ ಪೊಲೀಸರನ್ನು ಇರಿಸಲಾಗಿದೆ
ಇದರ ಜೊತೆಗೆ ಅರಮನೆ ಮೈದಾನ ಹಾಗೂ ಹೆಚ್ಕ್ಯೂಟಿಸಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ನೋ ಫ್ಲೈ ಜೋನ್ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.
ಇಂದು ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ನಗರದ ಹನ್ನೊಂದು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ.
ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ.
ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.