ಚಾಮರಾಜನಗರ: ಮನ್ ಕಿ ಬಾತ್ʼನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ್ದ ಕವಿ ಮಂಜುನಾಥ್ಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಜೋಗುಳ ಪದ ರಚಿಸಿದ್ದ ಕೊಳ್ಳೇಗಾಲದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರದ ದೆಹಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಬಂದಿದೆ.
ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರರಾಗಿರುವ ಮಂಜುನಾಥ್, ಪ್ರವೃತ್ತಿಯಲ್ಲಿ ಕವಿಯಾಗಿದ್ದಾರೆ. ಕೋವಿಡ್ ವೇಳೆ ‘ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ’ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು. ಕೇಂದ್ರ ಸರ್ಕಾರದ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆನ್ಲೈನ್ ರಂಗೋಲಿ, ದೇಶಭಕ್ತಿ ಗೀತೆ,
ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಪುತ್ರನ ಒತ್ತಾಸೆಗೆ ಮಣಿದು ಜೋಗುಳದ ಹಾಡು ರಚಿಸಿದ್ದ ಕವಿ ಮಂಜುನಾಥ್.ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಪೆನ್ ಎ ಲೋರಿ ಎಂಬ ಜೋಗುಳ ಗೀತೆ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಯ ಕವಿ ಮಂಜುನಾಥ್ ಪ್ರಥಮ ಸ್ಥಾನ ಪಡೆದಿದ್ದರು.