ಆಸ್ಟ್ರೇಲಿಯ ನಾಯಕನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕಪ್ ಟ್ರೋಫಿ ನೀಡಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಗೆದ್ದ ನಂತರ ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರಿಗೆ ವಿಜೇತ ಟ್ರೋಫಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಅವರೊಂದಿಗೆ ನೀಡಿದರು.
ಆಸ್ಟ್ರೇಲಿಯಾ 6 ವಿಕೆಟ್ಗಳಿಂದ ಗೆದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಪಂದ್ಯವನ್ನು ವೀಕ್ಷಿಸಿದರು.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತೀಯ ಆಟಗಾರರಿಗೆ ಆಯಾ ರನ್ನರ್ಸ್-ಅಪ್ ಪದಕಗಳನ್ನು ನೀಡಿ ಗೌರವಿಸಿದರು.