ದೆಹಲಿ;- ಕರ್ನಾಟಕ ಜಗಳಕ್ಕೆ ಮಾದರಿ ಎಂದು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಚುನಾವಣಾ ಪ್ರಚಾರದ ವೇಳೆ ಹೇಳಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿಗಳು ನಮ್ಮನ್ನು ನೆನೆಸಿಕೊಳ್ಳುತ್ತಿದ್ದಾರಲ್ಲಾ ಅಷ್ಟೇ ಸಾಕು. ನಮ್ಮ ಗ್ಯಾರಂಟಿ, ಕೆಲಸ, ಒಗ್ಗಟ್ಟು ಅವರ ನಿದ್ರೆ ಕೆಡಿಸಿದೆ. ಇದು ಸಂತೋಷದ ವಿಚಾರ, ಅವರಿಗೆ ಅಭಿನಂದನೆಗಳು. ಅದಕ್ಕೆ ಮುಖ್ಯಮಂತ್ರಿ ಏನು ಉತ್ತರ ಕೊಡಬೇಕೋ ಕೊಟ್ಟಿದ್ದಾರೆ ಎಂದು ಹೇಳಿದರು.
ಇನ್ನೂ ಬಿಜೆಪಿ ಅವರ ಪಕ್ಷದ, ನಾಯಕತ್ವದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಅದನ್ನು ಹೊರಗೆ ಹೇಳಿಕೊಳ್ಳಲು ಆಗದೆ, ಇಂತಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಯಾರೋ ಬಂದಂತೆ, ಹೋದಂತೆ ಮಾಡಿ ಹೇಳಿಕೆ ನೀಡುತ್ತಿದ್ದಾರೆ. ಕ್ಷೇತ್ರದ ಕೆಲಸಗಳಿಗೆ, ಕುಶಲೋಪರಿ ವಿಚಾರಿಸಲು ಅನೇಕರು ಬಂದಿರುತ್ತಾರೆ. ಆದರೆ ಮನೆಯಿಂದ ಹೊರಗೆ ಬಂದು ರಾಜಕೀಯ ವಿಚಾರಕ್ಕೆ ಬಂದಿದ್ದೇ ಎಂದು ಮಾಧ್ಯಮಗಳ ಮುಂದೆ ಹೇಳುತ್ತಾರೆ. ಚಲಾವಣೆಯಲ್ಲಿ ಇರಬೇಕಾದ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು.