ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ನಿಗದಿಪಡಿಸಿ ಹೈಕೋರ್ಟ್ ಆದೇಶಿಸಿದೆ.
ಖುದ್ದು ಹಾಜರಾತಿಯಿಂದ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ. ಜೊತೆಗೆ ಯಡಿಯೂರಪ್ಪರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ.
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಸಿಐಡಿ ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಸಲ್ಲಿಸಲಾಗಿತ್ತು.