ತುಮಕೂರು : ಅಕ್ರಮ ಗ್ಯಾಸ್ ರೀ ಫಿಲ್ಲಿಂಗ್ ಅಡ್ಡೆ ಮೇಲೆ ಕೊರಟಗೆರೆ ಪೊಲೀಸರು ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣದಲ್ಲಿ ಕೋಳಿ ಶೆಡ್ ನಲ್ಲಿ ಗ್ಯಾಸ್ ರೀಫಿಲ್ಲಿಂಗ್ ನಡೆಯುತ್ತಿತ್ತು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸೈ ಚೇತನ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ 137 ಗ್ಯಾಸ್ ಸಿಲಿಂಡರ್ಗಳು ಮತ್ತು ರಿಫಿಲ್ಲಿಂಗ್ ಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಘು ಎಂಬಾತ ಪತ್ರಕರ್ತರು, ವಕೀಲರ ನಕಲಿ ಐಡಿ ಕಾರ್ಡ್ಗಳನ್ನು ಬಳಸಿ ಅಕ್ರಮ ದಂಧೆ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.