ಮುಂಬೈ: ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯನ್ನು ಪೊಲೀಸರು ಗುಂಡಿಕ್ಕಿ ಹತ್ಯೆಗೈದ ವಿಚಾರವಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ ಎಂದು ವಿಪಕ್ಷಗಳಿಗೆ ಪ್ರಶ್ನಿಸಿದ್ದಾರೆ. ಆರೋಪಿಯ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ದಾಳಿಯ ವೇಳೆ ಪೊಲೀಸರು ಚಪ್ಪಾಳೆ ತಟ್ಟುವುದಿಲ್ಲ. ಇಂತಹ ಘಟನೆಗಳ ವೈಭವೀಕರಣ ನಡೆಯಬಾರದು. ಪ್ರಕರಣ ಸಂಬಂಧ ನ್ಯಾಯಯುತ ತನಿಖೆ ನಡೆಸಲಾಗುವುದು ಎಂದಿದ್ದಾರೆ.
CIBIL Score Tips: ನಿಮ್ಮ CIBIL Score ಕಡಿಮೆ ಇದ್ಯಾ..? ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ
ನಾವು ಎನ್ಕೌಂಟರ್ ಬೆಂಬಲಿಸುವುದಿಲ್ಲ. ಕಾನೂನಿನ ನಿಯಮವನ್ನು ಅನುಸರಿಸಬೇಕು ಮತ್ತು ಅದರ ಪ್ರಕಾರ ಅಪರಾಧಿಗೆ ಶಿಕ್ಷೆಯಾಗಬೇಕು. ಅದು ತ್ವರಿತವಾಗಿ ಆಗಬೇಕು ಎಂಬುದು ನನ್ನ ಅಭಿಪ್ರಾಯ. ನಮ್ಮ ಪೊಲೀಸರು ದಾಳಿ ಮಾಡಿದರೆ ಚಪ್ಪಾಳೆ ತಟ್ಟುವುದಿಲ್ಲ. ಅವರು ಆರೋಪಿಗಳ ಮೇಲೆ ಗುಂಡು ಹಾರಿಸುತ್ತಾರೆ ಎಂದು ಹೇಳಿದ್ದಾರೆ. ಇನ್ನೂ ಆರೋಪಿ ಹತ್ಯೆ ಬಳಿಕ ಬ್ಯಾನರ್ಗಳನ್ನು ಹಾಕಿ ಸಂಭ್ರಮಿಸಿದ ವಿಚಾರಕ್ಕೆ, ಇದು ಸಂಪೂರ್ಣವಾಗಿ ತಪ್ಪು. ಇದು ಸಂಭವಿಸಬಾರದು. ಇಂತಹ ಘಟನೆಗಳ ವೈಭವೀಕರಣ ನಡೆಯಬಾರದು ಎಂದಿದ್ದಾರೆ.