ಚಿಕ್ಕಮಗಳೂರು:- ಬೈಕ್ ಗೆ ಪೊಲೀಸ್ ಜೀಪ್ ಡಿಕ್ಕಿ: ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮಚ್ಚೇರಿ ಸಮೀಪದ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ಜರುಗಿದೆ.
ಕಲಬುರಗಿಯಲ್ಲಿ ಶರಣರ ರಥೋತ್ಸವ: ಜಾತ್ರೆಗೆ ಬಂದ್ರು ಲಕ್ಷ ಲಕ್ಷ ಭಕ್ತಗಣ!
47 ವರ್ಷದ ಗಂಗೋಜಿ ರಾವ್ ಮೃತ ಸವಾರ. ಮೃತ ಗಂಗೋಜಿರಾವ್ ಕಡೂರಿನಿಂದ ಪಟ್ಟೇದೇವರಹಳ್ಳಿಗೆ ಹೋಗುತ್ತಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜೀಪ್ ಕೂಡ ಕಡೂರಿನಿಂದ ಸಿಂಗಟಗೆರೆ ಪೋಲಿಸ್ ಸ್ಟೇಷನ್ಗೆ ಹೋಗುತ್ತಿತ್ತು. ಈ ವೇಳೆ ಮಚ್ಚೇರಿಯ ಶ್ರೀರಂಗ ಕಾಂಕ್ರೀಟ್ ಪ್ರಾಡಕ್ಟ್ ಬಳಿ ಗಂಗೋಜಿರಾವ್ ತನ್ನ ಬೈಕ್ ನಿಲ್ಲಿಸಿಕೊಂಡು ಫೋನ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕಡೂರು ಕಡೆಯಿಂದ ಬಂದ ಸಿಂಗಟಗೆರೆ ಠಾಣೆಯ ಪೊಲೀಸ್ ಜೀಪ್ ಸ್ಕೂಟಿಗೆ ಡಿಕ್ಕಿಯಾಗಿ ಗಂಗೋಜಿರಾವ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.