ತುಮಕೂರು: ಪೊಲೀಸರು ಯಾವುದೇ ದೇಶ ಅಥವಾ ರಾಜ್ಯದ ಅವಿಭಾಜ್ಯ ಅಂಗವಾಗಿದೆ. ಸಂಬಂಧಪಟ್ಟ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯ. ಜನರು ಕಾನೂನು ಪಾಲನೆ ಮತ್ತು ಅಪರಾಧವನ್ನು ತಪ್ಪಿಸಲು. ಆದರೆ, ಪ್ರಸ್ತುತ ಸಮಾಜದಲ್ಲಿ ಅಪರಾಧಗಳು ವಿಪರೀತವಾಗಿ ಹೆಚ್ಚಿವೆ. ಇಂತಹ ಸಂದರ್ಭಗಳಲ್ಲಿ ಪೊಲೀಸರ ಪಾತ್ರ ಬಹಳ ಮುಖ್ಯವಾಗುತ್ತದೆ. ಆದ್ರೆ ಇಲ್ಲೊಬ್ಬ ಕಾಮುಕ ಪೊಲೀಸ್ ದೂರು ನೀಡಲು ಬಂದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.
ಹೌದು ವೈಎಸ್ಪಿ ರಾಮಚಂದ್ರಪ್ಪ ಹದ್ದು ಮೀರಿ ವರ್ತನೆಯ ವಿಡಿಯೋ ವೈರಲ್ ಆಗಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿರುವುದು ಇಡೀ ಪೊಲೀಸ್ ಇಲಾಖೆಯೆ ತಲೆ ತಗ್ಗಿಸುವಂತೆ ಮಾಡಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು.
ಬ್ಯಾಟರಿ ತೆಗೆಯಲು ಸಾಧ್ಯವಿಲ್ಲದ ಮೊಬೈಲ್ ಹ್ಯಾಂಗ್- ಸ್ಲೋ ಆಗ್ತಿದ್ಯಾ..? ಹಾಗಿದ್ರೆ ಈ ಟಿಪ್ಸ್ ಪಾಲಿಸಿ
ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.