ಮಾಗಡಿ:- ಶ್ರೀಕಾಂತ್ ಪೂಜಾರಿ ಪರ ಹೋರಾಟದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಮಾಜಿ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಶ್ರೀಕಾಂತ್ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ನೀವು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ ಇದ್ದಾರೆ.
ಅವರು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಎಂದರು. ‘ಪೂಜಾರಿ ಪರವಾಗಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ದುರುದ್ದೇಶವಿದೆ’ ಎಂದರು. ಇತ್ತ, 1992ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾದ ಶ್ರೀಕಾಂತ ಪೂಜಾರಿಗೆ ಹುಬ್ಬಳ್ಳಿಯಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.