ಬೆಂಗಳೂರು: ನಾನು ಡಿಸೆಂಬರ್ 6 ನಂತರ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಕಸರತ್ತು: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ನನ್ನ ಮನಸ್ಸಿನ ಭಾವನೆಯನ್ನೂ ಇದೇ ಡಿ. 6ರ ನಂತರ ಹೇಳುತ್ತೇನೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿರುವ ಮಾತಿಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ ಎಂದರು.
ಹೈಕಮಾಂಡ್ ಸೂಚನೆ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಎಂಬುದನ್ನು ಡಿ.6 ಬಳಿಕ ಹೇಳ್ತಿನಿ. ಬಿಡಿ, ಬಿಡಿಯಾಗಿ ವಿವರಿಸ್ತಿನಿ. ರಾಜಕಾರಣ ದೊಂಬರಾಟ ಅಲ್ಲ. ರಾಜಕಾರಣ ಯಾವುದೇ ಮನೆತನಕ್ಕೆ ಸೀಮಿತವಲ್ಲ.ರಾಜಕಾರಣ ನಾಟಕ ಕಂಪನಿ ಅಲ್ಲ. ಒಳ ಒಪ್ಪಂದಕ್ಕೆ ಸೀಮಿತವಲ್ಲ ಎಂದು ಹೇಳಿದ್ಧಾರೆ..