ಕನ್ನಡದ ಹೆಸರಾಂತ ನಟಿ ಪೂಜಾ ಗಾಂಧಿ ಇಂದು ಸಪ್ತಪದಿ ತುಳಿದಿದ್ದಾರೆ. ಇಂದು ಸಂಜೆ ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆದಿದಿದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.
ಕುವೆಂಪು ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಪೂಜಾಗಾಂಧಿ ಹಾಗೂ ವಿಜಯ್ ಘೋರ್ಪಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.