ವ್ಯಾಟಿಕನ್ ಸಿಟಿ : ನ್ಯುಮೋನಿಯಾ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪೋಪ್ ಫ್ರಾನ್ಸಿಸ್ ಅವರು ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ. ರಕ್ತ ಪರೀಕ್ಷೆಯನ್ನು ನಡೆಸಿದಾಗ ರಕ್ತಹೀನತೆ ಕಂಡು ಬಂದಿದ್ದು, ಅವರಿಗೆ ರಕ್ತ ವರ್ಗವಾಣೆಯನ್ನು ಮಾಡಲಾಗಿದೆ ಎಂದು ವ್ಯಾಟಿಕನ್ ಪ್ರಕಟಣೆಯಲ್ಲಿ ತಿಳಿಸಿದೆ.
ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ಪೋಪ್ ಫ್ರಾನ್ಸಿಸ್ ಅವರನ್ನು ಫೆಬ್ರವರಿ 14ರಿಂದ ರೋಮ್ನ ಅಗೋಸ್ಟಿನೋ ಗೆಮೆಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಹತ್ತು ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.