ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದೂ ಸಂಚಾರಕ್ಕೆ ಅಡಚಣೆ ಸಾಧ್ಯತೆ ಇದೆ. ಈ ಕುರಿತು ಬೆಂಗಳೂರು ನಗರ ಸಂಚಾರ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದ್ದಾರೆ.
India vs New Zealand: ಇಂದಿನಿಂದ ಭಾರತ ಮತ್ತು ನ್ಯೂಝಿಲೆಂಡ್ ಟೆಸ್ಟ್ ಪಂದ್ಯ! ಪ್ಲೇಯಿಂಗ್ 11 ಹೀಗಿರಲಿದೆ!
ಬೆಂಗಳೂರಿನಲ್ಲಿ ಭಾನುವಾರದಿಂದ ಬಿಟ್ಟೂಬಿಡದೆ ಸುರಿದ ಮಳೆಯಿಂದಾಗಿ ಸೋಮವಾರ ಸಾಕಷ್ಟು ಅಧ್ವಾನ ಸೃಷ್ಟಿಯಾಯಿತು. ಅನೇಕ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ, ಟ್ರಾಫಿಕ್ ಜಾಮ್ ಉಂಟಾಯಿತು. ಸೋಮವಾರ ರಾತ್ರಿ ವೇಳೆಗೆ ಅನೇಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
ಅದರಂತೆ ಇಂದು ಯಶವಂತಪುರ ಠಾಣಾ ವ್ಯಾಪ್ತಿಯ ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಮರ ಬಿದ್ದಿರುವ ಕಾರಣ ಎರಡು ಬದಿಯ ಸಂಚಾರ ಸ್ಥಗಿತವಾಗಿದೆ.
ನಮ್ಮ ಸಿಬ್ಬಂದಿಗಳು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನ ಸವಾರರು SRS ರಸ್ತೆ & ಸುರಾನಾ ಕಾಲೇಜ್ ರಸ್ತೆಯನ್ನು ಬಳಸಲು ಕೋರಲಾಗಿದೆ ಎಂದು ಸಂಚಾರ ಪೊಲೀಸರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿಎಂಟಿಐ ಜಂಕ್ಷನ್ ಬಳಿ ಎಫ್ಟಿಐ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಈ ರಸ್ತೆಯನ್ನು ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಸಲು ಕೋರಲಾಗಿದೆ