ಕೋಲಾರ: ಕಾಂಗ್ರೆಸ್ ಸರ್ಕಾರವು ಎಸ್ಟಿಪಿ ಮತ್ತು ಟಿಎಸ್ಪಿ ಅನುದಾನವನ್ನು ಉಚಿತ ಭಾಗ್ಯಗಳಿಗೆ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಕೋಲಾರದಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೋಲಾರ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಎಸ್ಸಿ, ಎಸ್ಟಿ ಜನಾಂಗಕ್ಕೆ ಪ್ರತ್ಯೇಕವಾಗಿ ಇಟ್ಟಿರುವ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಗಳಿಗೆ ಬಳಕೆ ಮಾಡಲಾಗುತ್ತಿದೆ. ಗ್ಯಾರಂಟಿಗಳಿಗೆ ಎಸ್ ಟಿಪಿ ಮತ್ತು ಟಿಎಸ್ಪಿ ಹಣವನ್ನು ವಿನಿಯೋಗಿಸಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ವಂಚಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.