ಬೆಂಗಳೂರು: ಇದೇ ಜನವರಿ 21ರಂದು ಮಂಗಳೂರಿನಲ್ಲಿ ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶ ಮುಂದೂಡಿದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದು, ಸಮಾವೇಶದ ದಿನಾಂಕ ಮತ್ತೆ ತಿಳಿಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಸಮಾವೇಶದ ತಯಾರಿ ಕಾರ್ಯಗಳನ್ನ ಮುಂದುವರೆಸುವಂತೆ ಸೂಚಿಸಿದ್ದಾರೆ.
Cumin Seeds Benefits: ಅಬ್ಬಾಬ್ಬ ಜೀರಿಗೆ ಸೇವಿಸುವುದರಿಂದ ಆಗುವ ಪ್ರಯೋಜನಗಳು ಒಂದೆರಡಲ್ಲ..!
ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ.