ಬೆಂಗಳೂರು : ಬೆಂಗಳೂರು ನಗರದ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಬೆಸ್ಕಾಂ ಸಿಬ್ಬಂದಿಗಳು ತುರ್ತು ಕಾರ್ಯಚರಣೆ ಕೈಗೊಂಡಿರುವುದರಿಂದ ಪವರ್ ಕಟ್ ಇರಲಿದ್ದು, ಬೆಂಗಳೂರು ದಕ್ಷಿಣ ವಲಯದ ಪೊಲೀಸ್ ಕ್ವಾರ್ಟರ್ಸ್, ಯೂನಿಟಿ ಬಿಲ್ಡಿಂಗ್, ಟೌನ್ ಹಾಲ್, ರವೀಂದ್ರ ಕಲಾಕ್ಷೇತ್ರ, ಜರಗನಹಳ್ಳಿ, ಕೃಷ್ಣ ದೇವರಾಯ ನಗರ ಸೇರಿದಂತೆ ಇನ್ನೂ ಹಲವು ಏರಿಯಾಗಳಲ್ಲಿ ವಿದ್ಯುತ್ ಅಭಾವ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದ್ದು, ಪವರ್ ಸಮಸ್ಯೆಯಿಂದ ರಾಜಧಾನಿ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
