ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಡ್ರಂಕ್ ಅಂಡ್ ಡ್ರೈವ್: ಒಂದೇ ದಿನಕ್ಕೆ ದಾಖಲಾದ ಪ್ರಕರಣಗೆಷ್ಟು ಗೊತ್ತಾ!?
ವಿದ್ಯುತ್ ಉಪಕೇಂದ್ರ 220/66/11ಕೆವಿ ಎಸ್ಆರ್ಎಸ್ ಪೀಣ್ಯದಲ್ಲಿ ತ್ರೈಮಾಸಿಕ ನಿರ್ವಹಣೆಯ ನಿಮಿತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 9:30ರಿಂದ ಮಧ್ಯಾಹ್ನ 3:330ರವರೆಗೆ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.
ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳನ್ನು ನೋಡುವುದಾದರೆ, ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆಗಳಲ್ಲಿ ವಿದ್ಯುತ್ ಇರುವುದಿಲ್ಲ.
ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್,
ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.