ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಹಿನ್ನೆಲೆ ನಿನ್ನೆ ಕೈಗಾರಿಕೋದ್ಯಮಿಗಳು ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಇಂದು ಕೈಗಾರಿಕೋದ್ಯಮಿಗಳ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ಮಾಡಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದೆ. ಇಂಧನ ಇಲಾಖೆ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಭಾಗಿಯಾಗಲಿದ್ದಾರೆ.
Price Hike: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹೆಚ್ಚಾಗುತ್ತಾ ಹೋಟೆಲ್ ಊಟ, ತಿಂಡಿ ದರ..?

ಒಂದು ಕಡೆ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಮಸ್ಯೆ ಉಂಟಾಗಿದೆ. ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ (Congress) ನಾಯಕರು ಕಿಡಿಕಾರುತ್ತಿದ್ದಾರೆ. ಇನ್ನೊಂದೆಡೆ ವಿದ್ಯುತ್ ದರ (Electricity Hike) ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಇವೆಲ್ಲದರ ಮಧ್ಯೆ ಹೋಟೆಲ್ ಮಾಲೀಕರು ಸಾರ್ವಜನಿಕರಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.
