ಬೆಂಗಳೂರು:- ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕುಡಿದು ಕಾರು ಚಾಲನೆ: ಮರಕ್ಕೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ
ಈ ಸಂಬಂಧ ಮಾತನಾಡಿದ ಅವರು, ಸಚಿವ ರಾಜಣ್ಣ, ಡಿಸಿಎಂ ಡಿಕೆಶಿ ನಡುವೆ ಮಾತಿನ ಸಮರ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ನನ್ನನ್ನು ಸೇರಿದಂತೆ ಎಲ್ಲರೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಅಂತ ಸ್ಪಷ್ಟಪಡಿಸಿದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದರು. ನಗರ ಪ್ರದೇಶ, ಮುನಿಸಿಪಾಲಿಟಿಗಳಲ್ಲಿ, ನಗರಾಭಿವೃದ್ಧಿ ವ್ಯಾಪ್ತಿಯ ಆಸ್ತಿಗಳಿಗೆ ಬಿ ಖಾತಾ ಅಭಿಯಾನ ಶುರು ಮಾಡಿದ್ದೇವೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.