ಬೆಂಗಳೂರು ನಗರದ ಹೆಬ್ಬಾಳದಲ್ಲಿ ಸಚಿವ ಪ್ರಭು ಚವ್ಹಾಣ್ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಧಾನಗೊಂಡ ಸಚಿವರು ಇಲಾಖೆಯ ಬಲವರ್ಧನೆಗೆ ಶ್ರಮಿಸಿ ಇಲ್ಲವೇ ಜಾಗಖಾಲಿ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸ್ಥಾನದಲ್ಲಿ ಅಧಿಕಾರಿಗಳು ಇರುವುದೇ ಇಲ್ಲ, ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಕೃಷಿಯೊಂದಿಗೆ ರೈತಾಪಿ ವರ್ಗ ಪಶುಸಂಗೋಪನೆಯನ್ನು ಅವಲಂಬಿಸಿದ್ದಾರೆ. ಸಕಾಲದಲ್ಲಿ ಜಾನುವಾರುಗಳ ಆರೋಗ್ಯ ನೋಡಿಕೊಳ್ಳಲು ಅವರೆಲ್ಲ ನಮ್ಮ ಇಲಾಖೆಯನ್ನು ಅವಲಂಬಿಸಿದ್ದಾರೆ. ಇಂತಹ ಸಮಯದಲ್ಲಿ ಕರ್ತವ್ಯಲೋಪವಾದರೆ ಪಶುಪಾಲಕರಿಗೆ ಆರ್ಥಿಕ ಸಂಕಷ್ಟ, ಜಾನುವಾರುಗಳು ಜೀವ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಇಲಾಖೆಯ ಬಲವರ್ಧನೆಗೆ ಶ್ರಮಿಸಿ ಇಲ್ಲವಾದರೆ ಜಾಗ ಖಾಲಿ ಮಾಡಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
