ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕೊಲೆಯಾಗಿದ್ದ ಪ್ರಬುದ್ಧಾಳ ಕೇಸ್ ಸದ್ಯ ಸಿಐಡಿ ತನಿಖೆಗೆ ನೀಡಲಾಗಿದೆ. ಮೃತಳ ತಾಯಿ ಸೌಮ್ಯಾ ಅವರು ಖುದ್ದು ಸಿಎಂ ಭೇಟಿಯಾಗಿ ಮನವಿ ಮಾಡಿದ್ದರು. ಅವರ ದೂರಿನ ಮೇರೆಗೆ ಸಿಐಡಿಗೆ ವಹಿಸಲು ಡಿಜಿ&ಐಜಿಪಿ ಅಲೋಕ್ ಮೋಹನ್ಗೆ CM ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಬುದ್ಧಾ ತಾಯಿ ಸೌಮ್ಯಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪದವಿ ಓದುತ್ತಿದ್ದ ನನ್ನ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ್ದಾನೆ. ಕೆಲವು ಅನುಮಾನಗಳಿದ್ದವು, ಆ ಯುವಕನಿಗೆ ಬೇಲ್ ಕೂಡ ಸಿಕ್ಕಿತ್ತು. ಆರೋಪಿಗೆ ಬೇಲ್ ಸಿಕ್ಕಿದೆ ಅಂತಾ ನಾವು ಸುಮ್ಮನಿದ್ದರೆ ಸರಿ ಹೋಗಲ್ಲ. ಹಾಗಾಗಿ ಸಿಐಡಿಗೆ ಕೊಡಬೇಕು ಅಂತಾ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ್ದೆವು ಎಂದರು.
ನನ್ನ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯನವರು ಸಿಐಡಿಗೆ ವಹಿಸಿದ್ದಾರೆ ಎಂದರು.