ಗದಗ: ಗದಗನ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಜಾ ಟಿವಿ ಗದಗ ಜಿಲ್ಲಾ ವರದಿಗಾರ ಶರಣು ದೊಡ್ಡೂರ ಅವರು ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಅವರು ಸನ್ಮಾನಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.