ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯ ರಣಕಹಳೆ ಊದಲಾಗಿದ್ದು, ಇಂದು ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಪ್ರಜಾಧ್ವನಿ-2 ಸಭೆ ನಡೆಯಲಿದ್ದು, ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಸುನೀಲ್ ಬೋಸ್ ಪರ ಸಿ.ಎಂ.ಸಿದ್ದರಾಮಯ್ಯ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಆದ್ದರಿಂದ ಕೊಳ್ಳೇಗಾಲದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಬೃಹತ್ ಸಭೆ ಏರ್ಪಡಿಸಲಾಗಿದ್ದು,
ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳ ಮೂಲಕ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ವಿಶೇಷ ಪ್ಲಾನ್ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಭರ್ಜರಿ ಬ್ಯಾಟಿಂಗ್ ಆಡಲು ಸಿ.ಎಂ.ಸಿದ್ದರಾಮಯ್ಯ ಸನ್ನದ್ದವಾಗಿದ್ದು, ಶತಾಯಗತಾಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಸಿ.ಎಂ.ಸಿದ್ದತೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿಕೆ ಶಿವಕುಮಾರ್ , ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೆಶ್ ಸಾಥ್ ನೀಡಲಿದ್ದಾರೆ.