ಬೆಂಗಳೂರು:– ಖಾಸಗಿ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೀಗಾಗಲೇ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಅವರು ಭಾರತಕ್ಕೆ ಅಗಮಿಸಲು ಕೊನೆಗೂ ಟಿಕೆಟ್ ಬುಕ್ ಮಾಡಿದ್ದಾರೆ.
ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಗೋಲ್ಡ್ ಪ್ರಿಯರಿಗೆ ಶಾಕ್.. ಇಳಿಕೆ ಕಾಣದ ಚಿನ್ನದ ದರ.. ಇಲ್ಲಿದೆ ಇವತ್ತಿನ ದರಪಟ್ಟಿ!
ಮೇ 31ರ ಬೆಳಗ್ಗೆ 10:30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಂತೆ ಮೇ 31ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಆಗಮಿಸುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ( AM) ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ಆ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ. ಬದಲಿಗೆ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗಹುದು
ಇನ್ನು ಪ್ರಜ್ವಲ್ ರೇವಣ್ಣ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ, ಹೀಗಾಗಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂದು ಇಂಚಿಚು ಮಾಹಿತಿಯನ್ನು ಕಲೆಹಾಕುತ್ತಿದೆ