ಬೆಂಗಳೂರು:– ಸಂಸದ ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ವಾದಿಸಲು ವಿಶೇಷ ಅಭಿಯೋಜಕರನ್ನ ರಾಜ್ಯ ಸರ್ಕಾರ ನೇಮಿಸಿದೆ.
ಕೋಲಾರ: ಸರಣಿ ಅಪಘಾತ.. ತಪ್ಪಿದ ಅನಾಹುತ….!
ವಿಶೇಷ ಅಭಿಯೋಜಕರನ್ನಾಗಿ(ಎಸ್ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 30) ಆದೇಶ ಹೊರಡಿಸಿದೆ. ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ. ಇದೀಗ ಇವರನ್ನೇ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ
ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ (Holenarasipura) ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲಾಗಿದ್ದು, ಎಫ್ಐಆರ್ನಲ್ಲಿ ಹೆಚ್.ಡಿ.ರೇವಣ್ಣ ಆರೋಪಿ ನಂಬರ್1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.