ಬೆಂಗಳೂರು:- ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಕೊನೆಗೂ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧರಿಸಿದ್ದಾರೆ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಅರೆಸ್ಟ್ ಮಾಡುವುದು ಕಷ್ಟವೇನಲ್ಲ – ಅಣ್ಣಮಲೈ..!
ವಿದೇಶಕ್ಕೆ ತೆರಳಿರುವ ಪ್ರಜ್ವಲ್, ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ದೆಹಲಿ, ಬೆಂಗಳೂರಿನ ನುರಿತ ವಕೀಲರ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾರೆ. ಈ ಮಧ್ಯೆ, ವಕೀಲರ ಸಲಹೆಯಂತೆ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ
ಈ ಮಧ್ಯೆ, ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಅರ್ಜಿ ಸಲ್ಲಿಸಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಈ ಸಂಬಂಧ ಜನಪ್ರತಿನಿದಿಗಳ ವಿಶೇಷ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯುವುದಕ್ಕೆ ಸಂಬಂಧಿಸಿದಂಥ ಗಂಭೀರ ಆರೋಪ ಯಾವುದೂ ಇಲ್ಲದ ಕಾರಣ ಅರ್ಜಿ ವಾಪಸ್ ಪಡೆದಿದ್ದರು.