ನವದೆಹಲಿ:- ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿಗೆ PM ಮೋದಿ ಮಾತಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದ್ರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
Gold Price: ಸತತ ಹೆಚ್ಚಳದಲ್ಲಿ ಚಿನ್ನದ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ!
ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.
ಆತ ದೇಶದಿಂದ ಹೊರಹೋದ ಬೆನ್ನಲ್ಲಿಯೇ ಈ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ. ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.