ಬೆಂಗಳೂರು:- ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಪ್ರಜ್ವಲ್ ಪ್ರಕರಣವ ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ಸಂಚು – ಯತ್ನಾಳ್..!
ನಿನ್ನೆ ಡ್ರೈವರ್ ವಿಡಿಯೋ ರಿಲೀಸ್ ಮಾಡಿದ್ನಲ್ವಾ? ಆತ ಮಾತನಾಡಿರುವ ವಿಡಿಯೋ ಯಾರು ಮಾಡಿದ್ದು? ನಿನ್ನೆ ಅವನ ಕೈಯಲ್ಲಿ ವಿಡಿಯೋ ಬಿಟ್ಟಿದ್ರು, ಏನ್ ಹೇಳಿಕೆ ಕೊಟ್ಟಾ, ದೇವರಾಜ್ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದೆ ಅಂತಾ ಹೇಳಿದ್ದ. ಆದರೆ ಇಂದು ಬೆಳಗ್ಗೆ ಈ ಚಿಲ್ಲರೆ ಸಹೋದರರು ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತಾ ಹೇಳಿಕೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ. ದೇವರಾಜ್ ಮೊದಲು ನನ್ನನ್ನು ಭೇಟಿಯಾಗಿದ್ದಾನೆಂದು ಈ 420ಗಳು ಹೇಳಿದ್ದಾರೆ. ಎಲ್ಲಿಂದ ವಿಡಿಯೋ ಮಾಡಿ ಬಿಟ್ಟಿದ್ದಾನೆ ಅದನ್ನು ಮೊದಲು ತಿಳಿದುಕೊಳ್ಳಿ. ಸುಲಭವಾಗಿ ನಮ್ಮನು ಕೆಣಕಿದರೆ ನಾವು ಸುಮ್ಮನೇ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)