ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಬಗ್ಗೆ ಮಾತನಾಡುತ್ತಾ ಗ್ರಾಮೀಣ ಭಾಗದ ಮಹಿಳೆಯರನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಪ್ರಕಾಶ್ ರಾಜ್, ಕುಮಾರಸ್ವಾಮಿ ದಾರಿ ತಪ್ಪಿದ ಮಗ, ಇಂತವರು ಚುನಾವಣೆಯಲ್ಲಿ ಗೆಲ್ಲಬೇಕಾ ಎಂದು ಪ್ರಶ್ನಿಸಿದ್ದರು. ಪ್ರಕಾಶ್ ರಾಜ್ ಅವರ ಹೇಳಿಕೆಯ ನಂತರ ಜೆಡಿಎಸ್ ಸರಣಿ ಟ್ವೀಟ್ ಅನ್ನು ಮಾಡಿದೆ. ಪ್ರಕಾಶ್ ರಾಜ್ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅನಧಿಕೃತ ವಕ್ತಾರರಾಗಿದ್ದಾರೆ. ಅದರಿಂದ ಈ ಪರಿ ಲಾಭವಿದೆಯಾ ಎಂದು ವ್ಯಂಗ್ಯವಾಡಿದೆ.
’ ಕರ್ನಾಟಕದಲ್ಲಿ @INCKarnataka ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ @prakashraaj ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ..
ನಿಮ್ಮ ಮನೆಯಲ್ಲಿ ಇರುವೆಗಳ ಕಾಟವೇ.? ಸುಲಭವಾಗಿ ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್
’ ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ..’
’ ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳಕಂಪನಿಗೆ ಕೋಟಿ ಕೋಟಿ ಸುರಿದಿರುವ @INCKarnataka ಸರಕಾರ, ನಿಮ್ಮ ‘ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. ’ ಎಂದು ಜೆಡಿಎಸ್ ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ.