ದಕ್ಷಿಣ ಭಾರತದ ಹೆಸರಾಂತ ನಟಿ, ಕನ್ನಡತಿ ಪ್ರಣೀತಾ ಸುಭಾಷ್ ಟರ್ಕಿ (Turkey) ಪ್ರವಾಸದಲ್ಲಿ ಇದ್ದಾರೆ. ಕುಟುಂಬದೊಂದಿಗೆ ಟರ್ಕಿ ಪ್ರವಾಸದಲ್ಲಿರುವ ಅವರು, ತಿಳಿನೀಲಿ ಕಡಲು ಕಿನಾರೆಯಲ್ಲಿ ಸ್ವಿಮ್ ಸೂಟ್ (swimsuit) ಹಾಕಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲೂ ಅವರು ಹಂಚಿಕೊಂಡಿದ್ದಾರೆ. ಒಂದು ಕಡೆ ಪ್ರವಾಸದಲ್ಲಿ ನಟಿ ಬ್ಯುಸಿಯಾಗಿದ್ದರೆ, ಮತ್ತೊಂದು ಕಡೆ ರಿಷಿ ನಟನೆಯ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.
ಮೊನ್ನೆಯಷ್ಟೇ ರಿಷಿ ಹಾಗೂ ಪ್ರಣೀತಾ ನಟನೆಯ ಬಹು ನಿರೀಕ್ಷಿತ ಸಿನಿಮಾ ರಾಮನ ಅವತಾರದ ಹಾಡು ರಿಲೀಸ್ ಆಗಿದೆ. ಅದು ರಾಮನ ಅವತಾರ ಸಿನಿಮಾದ ಎರಡನೇ ಹಾಡು (Song) ಆಗಿದ್ದು, ಸಿಂಪಲ್ ಸುನಿ ಸಾಹಿತ್ಯದ ಮನಸ್ಸು ಬೇರೆ ದಿಕ್ಕಿಗೆ ಸಾಗಲು ಹಾಡಿಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದಾರೆ. ಉಡುಪಿ ಬೀಚ್ ನಲ್ಲಿ ಇಡೀ ಹಾಡನ್ನು ಚಿತ್ರೀಕರಿಸಲಾಗಿದೆ. ಸೊಗಸಾದ ಈ ಪ್ರೇಮಗೀತೆಯಲ್ಲಿ ರಿಷಿ ಹಾಗೂ ಪ್ರಣೀತಾ (Pranitha) ಜೋಡಿ ನೋಡುಗರ ಗಮನಸೆಳೆಯುತ್ತಿದೆ.
ರಾಮನ ಅವತಾರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.